ಕೋವಿಡ್ ಹೆಚ್ಚಳ-ಏ.17 ರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ರದ್ದು
ಉಡುಪಿ ಎ. 15: ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಇತರ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳು , ಏಪ್ರಿಲ್ 17 ರಂದು ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮಾಸೆಬೈಲು, ರಟ್ಟಾಡಿ ಮತ್ತು ಮಚ್ಚಟ್ಟು ಗ್ರಾಮಗಳಲ್ಲಿ ಆಯೋಜಿಸಿದ್ದ ಗ್ರಾಮ ಭೇಟಿ ಕಾರ್ಯಕ್ರಮವನ್ನು , ಪ್ರಸ್ತುತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.