ಉಡುಪಿ: 111 ಕೋವಿಡ್ ಪಾಸಿಟಿವ್ ದೃಢ, ಸಕ್ರಿಯ ಪ್ರಕರಣಗಳ ಸಂಖ್ಯೆ 526ಕ್ಕೆ ಏರಿಕೆ

ಉಡುಪಿ, ಎ.15(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ಏರು ಗತಿಯಲ್ಲಿ ಪತ್ತೆಯಾಗುತ್ತಿದ್ದು , ಇಂದು ಜಿಲ್ಲೆಯಲ್ಲಿ 111 ಪ್ರಕರಣಗಳು ಪತ್ತೆಯಾಗಿದೆ.

ಈ ಪೈಕಿ ಉಡುಪಿಯಲ್ಲಿ 63, ಕುಂದಾಪುರ 31, ಕಾರ್ಕಳ 17 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢ ಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 526ಕ್ಕೆ ಏರಿಕೆಯಾಗಿದೆ. ಎ.14 ರ ವರೆಗೆ ಜಿಲ್ಲೆಯಲ್ಲಿ 4,57,163 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 26,369 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 25,651ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.  192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!