ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾ ವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಪ್ರಕಟ ಮಾಡಿದ್ದರಿಂದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತೀವ್ರ ಕುತೂಹಲ ಮೂಡಿಸಿತ್ತು. ನಿರೀಕ್ಷೆಯಂತೆ ಹೈಕಮಾಂಡ್ ಒಬ್ಬ ಅಚ್ಚರಿಯ ಅಭ್ಯರ್ಥಿಯನ್ನು ಸೇರಿಸಿ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಮೊನ್ನೆ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾ ಗಿತ್ತು. ಇದೀಗ ಹೈಕ ಮಾಂಡ್ ಅಣತಿಯಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮೂವ ರಿಗೆ ವಿಧಾನ ಪರಿಷತ್ ಪ್ರವೇಶಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್ ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ, ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಅವರುಗಳ ಹೆಸರುಗಳನ್ನು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳೆಂದು ಘೋಷಣೆ ಮಾಡಲಾಗಿದೆ. ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಮಾಜಿ ಶಾಸಕ ಸುನಿಲ್ ವಲ್ಯಾಪುರೆ ಅವರಿಗೆ ರಾಜ್ಯದಲ್ಲಿ ಸರ್ಕಾರ ರಚನೆಗೆ ಕಾರಣರಾಗಿದ್ದ ಕೋಟಾದಲ್ಲಿ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರಿಗೆ ಪಕ್ಷದ ಕಾರ್ಯಕರ್ತ ಕೋಟಾದಡಿ ಟಿಕೆಟ್ ಕೊಡಲಾಗಿದೆ. ಪ್ರತಾಪ್ ಸಿಂಹ ನಾಯಕ್ ಅವರು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದವರು. ಸಂಘಪರಿವಾರದ ವ್ಯಕ್ತಿಯಾಗಿರುವ ಪ್ರತಾಪ್ ಸಿಂಹ ನಾಯಕ್ ಹೆಸರು ಈ ಬಾರಿ ಅಚ್ಚರಿಯಾಗಿ ಸೇರ್ಪಡೆಯಾಗಿದೆ. ಇನ್ನು ವಿಧಾನ ಪರಿಷತ್ ಆಯ್ಕೆ ಬಯಸಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಮತ್ತೆ ಅತಂತ್ರರಾಗಿದ್ದಾರೆ. ವಿಧಾನ ಪರಿಷತ್ ಟಿಕೆಟ್‌ಗೆ ತೀವ್ರ ಪ್ರಯತ್ನ ನಡೆಸಿದ್ದ ವಿಶ್ವನಾಥ್ ಅವರ ಹೆಸರನ್ನು ಹೈಕಮಾಂಡ್ ಪರಿಗಣಿಸಿಲ್ಲ. ಹೀಗಾಗಿ ಅದು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಮೇಲೆ ಪರಿಣಾಮ ಬೀರಿದರೂ ಅಚ್ಚರಿಯಿಲ್ಲ. ಐವನ್‌ಗೆ ತಪ್ಪಿದ ಅವಕಾಶ! ಅಲ್ಪಸಂಖ್ಯಾತ ಕೋಟಾದಡಿ ನಿವೇದಿತ ಆಳ್ವ, ಐವನ್ ಡಿಸೋಜಾ, ಬೆಳ್ತಂಗಡಿಯ ಪ್ರವೀಣ್ ಫೆರ್ನಾಂಡಿಸ್, ಜಬ್ಬಾರ್, ಸಲೀಂ ಅಹ್ಮದ್ ಮೊದಲಾದವರು ರೇಸ್‌ನಲ್ಲಿದ್ದರು. ಹೊಸ ಮುಖ ಪ್ರವೀಣ್ ಫೆರ್ನಾಂಡಿಸ್ ಅವರು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಮೂಲಕ ತನಗೊಂದು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಐವನ್ ಡಿಸೋಜಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲಕ ಬಾರೀ ಪ್ರಯತ್ನ ನಡೆಸಿದ್ದರು. ಐವನ್ ಮರು ಆಯ್ಕೆಗೆ ಕ್ರಿಶ್ಚಿಯನ್ ಸಮುದಾಯದಲ್ಲೇ ಬಾರೀ ವಿರೋಧ ಇತ್ತು. ಕೊನೆಗಳಿಗೆಯಲ್ಲಿ ವಿಧಾನ ಪರಿಷತ್‌ಗೆ ಆಯ್ಕೆಯ ಜವಾಬ್ದಾರಿಯನ್ನು ಹೈಕಮಾಂಡ್‌ಗೆ ಬಿಟ್ಟುಕೊಡಲಾಯಿತು. ಹೈಕಮಾಂಡ್ ಬಿ.ಕೆ ಹರಿಪ್ರಸಾದ್ ಮತ್ತು ನಸೀರ್ ಅಹ್ಮದ್ ರನ್ನು ಆಯ್ಕೆ ಮಾಡಿತು. ಜೆಡಿಎಸ್‌ನಿಂದ ಕೋಲಾರದ ಗೋವಿಂದ ರಾಜು ಹೆಸರು ಅಂತಿಮಗೊಂಡಿದೆ. |