ಉಡುಪಿ: 101 ಕೋವಿಡ್ ಪಾಸಿಟಿವ್ ದೃಢ, ಓರ್ವರು ಸೋಂಕಿನಿಂದ ಮೃತ್ಯು

ಉಡುಪಿ, ಎ.16(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 101 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಈ ಪೈಕಿ ಉಡುಪಿಯಲ್ಲಿ 63, ಕುಂದಾಪುರ 23, ಕಾರ್ಕಳ 14 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 591 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಎ.15 ರ ವರೆಗೆ  4,59,554 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 26,470 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 25,686 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ಜಿಲ್ಲೆಯಲ್ಲಿ ಉಡುಪಿಯ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಈ ವರೆಗೆ 193 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!