ಉಡುಪಿ: ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತೆಂಕನಿಡಿಯೂರಿನ ಮಮತಾ ಶೆಟ್ಟಿ ನೇಮಕ
ಉಡುಪಿ ಎ.17(ಉಡುಪಿ ಟೈಮ್ಸ್ ವರದಿ): ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆಯಾಗಿ ತೆಂಕನಿಡಿಯೂರಿನ ಮಮತಾ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದ್ದು, ನಾಯಕರಾದ ಪ್ರಮೋದ್ ಮಧ್ವರಾಜ್ ಅವರ ಸೂಚನೆಯಂತೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸತೀಶ್ ಅಮೀನ್ ಅವರ ಶಿಫಾರಸಿನ ಮೇರೆಗೆ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಅವರ ಆದೇಶದಂತೆ ತೆಂಕನಿಡಿಯೂರಿನ ಮಮತಾ ಶೆಟ್ಟಿ ಅವರನ್ನು ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.
ಈ ಬಗ್ಗೆ ಮಮತಾ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಸಮಿತಿಯು, ಈ ಆದೇಶ ಪತ್ರ ಕೈ ಸೇರಿದ ತಕ್ಷಣದಿಂದ ಅನ್ವಯವಾಗುವಂತೆ ಉಡುಪಿ ಬ್ಲಾಕ್ ನಲ್ಲಿ ಮಹಿಳೆಯರನ್ನು ಅತ್ಯುತ್ತಮ ರೀತಿಯಲ್ಲಿ ಸಂಘಟಿಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಆದೇಶ ಪತ್ರದಲ್ಲಿ ಕೋರಲಾಗಿದೆ.