ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ ಏ. 17(ಉಡುಪಿ ಟೈಮ್ಸ್ ವರದಿ): ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು, ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ರೂ.19,965 ಗೌರವಧನ ನೀಡಲಾಗುವುದು.
ವಿದ್ಯಾರ್ಹತೆ: ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಮ್.ಎಸ್.ಡಬ್ಲ್ಯೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್.ಜಿ.ಓ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರುವ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಯನ್ನು ಬಿಳಿ ಹಾಳೆಯಲ್ಲಿ, ಸ್ವವಿವರಗಳನ್ನು ನಮೂದಿಸಿದ ಬಯೋಡಾಟ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘ ಉಡುಪಿ, ಇವರ ಹೆಸರಿಗೆ ಬರೆದು, ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಎ.30 ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.