ಉಡುಪಿ: 118 ಕೋವಿಡ್ ಪಾಸಿಟಿವ್ ದೃಢ, ಸಕ್ರಿಯ ಪ್ರಕರಣ ಗಣನೀಯ ಇಳಿಕೆ
ಉಡುಪಿ, ಎ.17(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನೂರಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದೆ. ಇಂದು ಜಿಲ್ಲೆಯಲ್ಲಿ 118 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 69, ಕುಂದಾಪುರದಲ್ಲಿ 34, ಕಾರ್ಕಳ ದಲ್ಲಿ 15 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ 583 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಎ.16 ರ ವರೆಗೆ 4,62,441 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 26,588 ಮಂದಿಯಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 25,812 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 193 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಒಂದೆಡೆ ದಿನಾ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದರೂ ಕೂಡಾ, ಸೊಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರಿದೆ. ಹಾಗಾಗಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಜಿಲ್ಲೆಯ ಜನತೆಗೆ ಸಮಾಧಾನಕರ ವಿಷಯವಾಗಿದೆ.