ಉಡುಪಿ: ಜಿಲ್ಲೆಯಲ್ಲಿ ಇಂದು ಕೊರೋನಾ ಪ್ರಕರಣ ದಾಖಲೆ ಮಟ್ಟದಲ್ಲಿ ಏರಿಕೆ

ಉಡುಪಿ, ಎ.18(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 150 ಕ್ಕೂ ಅಧಿಕ ಕೊರೋನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಮತ್ತೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 152 ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿದೆ. ಉಡುಪಿಯೊಂದರಲ್ಲಿ 107 ಪ್ರಕರಣಗಳು ಪತ್ತೆಯಾಗಿದ್ದು, ಉಳಿದಂತೆ  ಕುಂದಾಪುರ 28, ಕಾರ್ಕಳ 16 ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 660 ಕ್ಕೆ ಏರಿಕೆಯಾಗಿದೆ.ಎ.17 ರ ವರೆಗೆ ಜಿಲ್ಲೆಯಲ್ಲಿ 4,65,980 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ26,740 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 25,887 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ193 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!