ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಶುಲ್ಕ ವಸೂಲಿ – ಪ್ರಮೋದ್ ಮಧ್ವರಾಜ್ ಟ್ವೀಟ್
ಉಡುಪಿ ಎ.18(ಉಡುಪಿ ಟೈಮ್ಸ್ ವರದಿ) ಜಿಲ್ಲಾಸ್ಪತ್ರೆಯಲ್ಲಿ ವಿದೇಶಕ್ಕೆ ಹೋಗುವವರಿಗೆ ಕೋವಿಡ್ ಪರೀಕ್ಷೆ ನಡೆಸಲು ಶುಲ್ಕ ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಜಿಲ್ಲಾಧಿಕಾರಿಯವರ ಬಳಿ ಈ ಕ್ರಮದ ಬಗ್ಗೆ ಪರೀಕ್ಷಿಸುವಂತೆ ಕೇಳಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಡುಪಿ ಜಿಲ್ಲಾಧಿಕಾರಿಗಳೇ, ಜಿಲ್ಲಾಸ್ಪತ್ರೆಯಲ್ಲಿ ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳುವವರ ಕೋವಿಡ್ ಪರೀಕ್ಷೆ ನಡೆಸಲು ಶುಲ್ಕ ಪಡೆಯಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ. ಒಂದು ವೇಳೆ ಶುಲ್ಕ ಪಡೆದುಕೊಳ್ಳುತ್ತಿದ್ದರೆ ಅದು ಸರಿಯಾಗಿದ್ದರೆ ಇದು ರಾಜ್ಯದ ಇತರ ಸರಕಾರಿ ಆಸ್ಪತ್ರೆಗಳಲ್ಲಿಯೂ ನಡೆಯುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಎಂದು ಬರೆದುಕೊಂಡಿದ್ದಾರೆ.