ಕಡಿಯಾಳಿ ದೇವಸ್ಥಾನದ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ
ಉಡುಪಿ ಎ.19(ಉಡುಪಿ ಟೈಮ್ಸ್ ವರದಿ): ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಎ.26 ರಂದು ನಡೆಯಲಿರುವ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮ ಎ.18 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಮತ್ತು ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನಾಗೇಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಕೆ. ನಾಗರಾಜ ಶೆಟ್ಟಿ, ಮಂಜುನಾಥ್ ಹೆಬ್ಬಾರ್, ಶಶಿಕಲಾ ಭರತ್, ಸಂಧ್ಯಾ ಪ್ರಭು, ರಮೇಶ್ ಸೇರಿಗಾರ್ ಬೈಲಕೆರೆ, ಕಿಶೋರ್ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ರಾಮಚಂದ್ರ ಸನಿಲ್, ಭಾರತಿ ಚಂದ್ರಶೇಖರ್, ಕುಂಜಿತ್ತಾಯ ಶ್ರೀನಿವಾಸ್ ಉಪಾಧ್ಯ, ಪದ್ಮಾ ರತ್ನಾಕರ್, ವಸಂತರಾವ್, ಸತೀಶ್ ಕುಲಾಲ್ ಕಡಿಯಾಳಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ. ವಸಂತ ಭಟ್, ಸಂಚಾಲಕ ಮಟ್ಟಾರು ಗಣೇಶ್ ಕಿಣಿ, ಸ್ಥಳೀಯ ನಗರಸಭಾ ಸದಸ್ಯ ಗೀತಾ ಶೇಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮೋಹನ್ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.
ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮದ ಎ.26 ರಂದು ಬೆಳಿಗ್ಗೆ 11.37 ಕ್ಕೆ ನಡೆಯಲಿದೆ. ಉಡುಪಿ ಶಾಸಕ ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶೀಲನ್ಯಾಸ ನೆರವೇರಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಇದೇ ವೇಳೆ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಧ್ವನಿ ಸುರುಳಿ ಬಿಡುಗಡೆ ಮಾಡಲಿದ್ದಾರೆ.