ಬಜಪೆ: ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಚೇರಿಯಲ್ಲಿ ಎಸಿ ಸ್ಪೋಟ!
ಬಜಪೆ ಎ.19 (ಉಡುಪಿ ಟೈಮ್ಸ್ ವರದಿ): ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಚೇರಿಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಬೆಳಗ್ಗೆ 9.15ರ ಸುಮಾರಿಗೆ ಎಸಿ ಸ್ಪೋಟಗೊಂಡ ಹಿನ್ನೆಲೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು.
ಇನ್ನು ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಚರ್ಚ್ ಬಳಿಯ ರಸ್ತೆಯನ್ನು ಬಂದ್ ಮಾಡಿ, ಪೊಲೀಸ್ ಠಾಣೆ ಹತ್ತಿರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿತ್ತು.