ಹಡಿಲು ಭೂಮಿಯಲ್ಲಿ ಕೃಷಿ ಆಂದೋಲನ: ಹೂಳೆತ್ತುವ ಕಾರ್ಯಕ್ಕೆ ಡಿಸಿ ಚಾಲನೆ
ಉಡುಪಿ ಎ.19 (ಉಡುಪಿ ಟೈಮ್ಸ್ ವರದಿ): ಹಡಿಲು ಭೂಮಿ ಕೃಷಿ ಆಂದೋಲನ ಕಾರ್ಯವನ್ನು ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಳ್ಳಲಾಗಿದೆ. ಇದೀಗ ಈ ಆಂದೋಲನದ ಪ್ರಥಮ ಹಂತವಾಗಿ ಕೃಷಿ ಚಟುವಟಿಕೆ ನಡೆಸುವ ಗದ್ದೆಗಳಿಗೆ ಸಮರ್ಪಕವಾಗಿ ನೀರು ಹರಿದು ಹೋಗಲು ತೋಡುಗಳ ಹೂಳೆತ್ತುವ ಕಾರ್ಯ ಆರಂಭಿಸಲಾಗಿದೆ.
ಮೊದಲ ಹಂತವಾಗಿ ಉಡುಪಿಯ ಕೆಳಪರ್ಕಳ ಗೋಪಾಲಕೃಷ್ಣ ದೇವಸ್ಥಾನದ ಬಳಿಯ ಗದ್ದೆಗಳಿಗೆ ನೀರು ಹರಿದುಹೋಗುವ ತೋಡಿನ ಹೂಳೆತ್ತುವ ಕಾರ್ಯಕ್ಕೆ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರದಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಿಟ್ಟೂರು ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಮುರಳಿ ಕಡೆಕಾರ್, ಸ್ಥಳೀಯರಾದ ರಂಜಿತ್, ಹೇಮಂತ್ ಹಾಗೂ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಶೇಷ ಕೃಷ್ಣ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.