ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್

ಬೆಂಗಳೂರು: ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಸಿದ್ದಾರೆ. 

ವಿಧಾನಸೌದದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಇತರೆ ರೋಗಿಗಳು ಈಗಾಗಲೇ ಬೆಡ್ ನಲ್ಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗಳು ಏಕಾಏಕಿ ಕಳುಹಿಸಲು ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳ ಜೊತೆ ಈಗಾಗಲೇ ಈ ಸಂಬಂಧ ಮಾತುಕತೆ ನಡೆದಿದೆ. ರೋಗಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಲು 48 ಗಂಟೆ ಸಮಯ ಕೇಳಿದ್ದಾರೆ. ಸರ್ಕಾರ ನಿಗದಿಪಡಿಸಿರುವ ಹಾಸಿಗೆ ವ್ಯವಸ್ಥೆಗಳನ್ನು ಖಾಸಗಿಯವರು ಮಾಡಲೇಬೇಕು. ಇಲ್ಲದೇ ಹೋದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರ ನಿಗದಿ ಮಾಡಿರುವ ಶೇ. 50 ರಷ್ಟು ಬೆಡ್ ಗಳನ್ನು ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ ಕೊಡಲೇಬೇಕು. ಇಲ್ಲದೆ ಹೋದಲ್ಲಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!