ಉಡುಪಿ: ಕೋವಿಡ್ ಪ್ರಕರಣ ಸಂಖ್ಯೆ ಮತ್ತೆ ಏರಿಕೆ- ಸಕ್ರಿಯ ಪ್ರಕರಣ 746ಕ್ಕೆ ಏರಿಕೆ

ಉಡುಪಿ, ಎ.19(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಸಕ್ರಿಯ ಕೋವಿಡ್ ಪ್ರಕರಣ ಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 163 ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 85, ಕುಂದಾಪುರ 36, ಕಾರ್ಕಳ 40 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 746ಕ್ಕೆ ಏರಿಕೆಯಾಗಿದೆ. ಎ.18ರ ವರೆಗೆ ಜಿಲ್ಲೆಯಲ್ಲಿ 4,68767 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ26,903ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 25,964 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ193 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!