ಉಡುಪಿ: ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳ- ಓರ್ವರ ಮೃತ್ಯು
ಉಡುಪಿ, ಎ.20(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಇಂದು 109 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಜಿಲ್ಲೆಯಲ್ಲಿ ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 742ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿ 28, ಕುಂದಾಪುರ 29, ಕಾರ್ಕಳ 49 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳನ್ನು ಗಮನಿದರೆ ಉಡುಪಿ ತಾಲೂಕಿನಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಆದರೆ ಅತೀ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿದ್ದ ಕಾರ್ಕಳದಲ್ಲಿ ಇಂದು ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಎ.19 ರ ವರೆಗೆ ಜಿಲ್ಲೆಯಲ್ಲಿ 4,72,860 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 27,012 ಮಂದಿಯಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 26077 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ಜಿಲ್ಲೆಯಲ್ಲಿ ಕೋವಿಡ್ಗೆ ಓರ್ವ ವ್ಯಕ್ತಿ ಬಲಿಯಾಗಿದ್ದು , ಈ ವರೆಗೆ ಜಿಲ್ಲೆಯಲ್ಲಿ 194 ಮಂದಿ ಮೃತಪಟ್ಟಿದ್ದಾರೆ.