ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಬಂದ್-ಉಳಿದ ದಿನ ನೈಟ್ ಕರ್ಫ್ಯೂ
ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹಾಗೂ ರವಿವಾರ ಸಂಪೂರ್ಣ ಕರ್ಫ್ಯೂ ವಿಧಿಸಿದ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.
ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ.
ಇನ್ನು ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಉಳಿದಂತೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಪ್ರಮುಖ ನಿರ್ಧಾರಗಳು
ರಾಜ್ಯದಲ್ಲಿ ಸೆಕ್ಷನ್ 144 ಜಾರಿ, ಮದುವೆ ಸಮಾರಂಭಗಳಿಗೆ ಕೇವಲ 50 ಜನರಿಗೆ ಅವಕಾಶ.
*ಶನಿವಾರ ಭಾನುವಾರ ದಿನಸಿ, ತರಕಾರಿ, ಹಾಲು ಅಂಗಡಿಗಳು 6ರಿಂದ 10ರವರೆಗೆ ಮಾತ್ರ ಓಪನ್
*ಶಾಲೆ ಕಾಲೇಜು, ಸಿನಿಮಾ ಹಾಲ್, ಮಾಲ್, ಸ್ವಿಮಿಂಗ್ ಪೂಲ್, ಧಾರ್ಮಿಕ ಸ್ಥಳ, ಹೋಟೆಲ್ ಬಂದ್
*ಬಾರ್, ಲಿಕರ್ ಶಾಪ್ ನಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶ
*ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅನುಮತಿ ನೀಡಲಾಗಿದೆ.
*ಬೆಂಗಳೂರಿನ ಮಾರುಕಟ್ಟೆಗಳನ್ನು 14 ದಿನಗಳವರೆಗೂ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
*ಸಲೂನ್, ಬ್ಯೂಟಿ ಪಾರ್ಲರ್ ಗಳಿಗೆ ಅವಕಾಶ.
Hotel band bar open meant goverment