ವೀಕೆಂಡ್ ಕರ್ಫ್ಯೂ: ಮದುವೆಗೆ 50 ಮಂದಿಗೆ ಮಾತ್ರ ಅವಕಾಶ, ಬಾರ್’ನಲ್ಲಿ ಪಾರ್ಸಲ್ಗೆ ಮಾತ್ರ ಧಾರ್ಮಿಕ ಸ್ಥಳ, ಹೋಟೆಲ್ ಬಂದ್!
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು ವಾರಾಂತ್ಯದಲ್ಲಿ ಕರ್ಫ್ಯೂ ಘೋಷಣೆ ಮಾಡಿದೆ.
ಮಂಗಳವಾರ ರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದರು. ನಾಳೆಯಿಂದ ಮೇ 4ರವರೆಗೂ ಸರ್ಕಾರ ಕಠಿಣ ನಿಯಮಗಳನ್ನು ಘೋಷಣೆ ಮಾಡಿದೆ. ರಾಜ್ಯದಲ್ಲಿ ಸೆಕ್ಷನ್ 144 ಜಾರಿ, ಮದುವೆ ಸಮಾರಂಭಗಳಿಗೆ ಕೇವಲ 50 ಜನರಿಗೆ ಅವಕಾಶ.
ವೀಕೇಂಡ್ ಕರ್ಫ್ಯೂ ವೇಳೆ ಏನಿರುತ್ತೆ? ಏನಿರಲ್ಲ?
* ಶಾಲೆ, ಕಾಲೇಜುಗಳು ಸಂಪೂರ್ಣ ಬಂದ್, ಆನ್ ಲೈನ್ ಕ್ಲಾಸ್ ಗಳಿಗೆ ಅವಕಾಶ.
* ದಿನಸಿ ಅಂಗಡಿಗಳು, ಹಣ್ಣು ತರಕಾರಿ, ಹಾಲಿನ ಡೇರಿ, ಮೀನು, ಮಾಂಸದ ಅಂಗಡಿ ತೆರೆಯಲು ಅನುಮತಿ.
* ಶಾಪಿಂಗ್ ಮಾಲ್, ಸಿನಿಮಾ ಹಾಲ್ ಗಳು, ಜಿಮ್, ಯೋಗಾ ಸೆಂಟರ್, ಸ್ವಿಮ್ಮಿಂಗ್ ಪೂಲ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಸ್ಪಾ ಬಂದ್.
* ಬಾರ್ , ರೆಸ್ಟೋರೆಂಟ್ ನಲ್ಲಿ ಮದ್ಯಸೇವನೆಗೆ ಅವಕಾಶವಿಲ್ಲ.
* ಸಾರ್ವಜನಿಕ, ರಾಜಕೀಯ ಸೇರಿ ಎಲ್ಲಾ ಕಾರ್ಯಕ್ರಮಗಳಿಗೆ ನಿರ್ಬಂಧ.
* ಸಲೂನ್, ಬ್ಯೂಟಿಪಾರ್ಲರ್ ಗಳಿಗೆ ಷರತ್ತುಬದ್ಧ ಅನುಮತಿ
* ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅನುಮತಿ.
* ಬ್ಯಾಂಕ್, ಇನ್ಶೂರೆನ್ಸ್ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ.
* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್.
* ಸರ್ಕಾರಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕೆಲಸಕ್ಕೆ ಅನುಮತಿ
* ಮೆಟ್ರೋ, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ.
* ಇ-ಕಾಮರ್ಸ್ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
* ದೇವಸ್ಥಾನ, ಚರ್ಚ್, ಮಸೀದಿ ಸೇರಿ ಎಲ್ಲಾ ಧಾರ್ಮಿಕ ಸ್ಥಳಗಳು ಬಂದ್.
* ಅಂತರಾಜ್ಯ, ಜಿಲ್ಲೆಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
* ಮದುವೆಗಳಿಗೆ 50 ಜನ. ಅಂತ್ಯಕ್ರಿಯೆಗೆ ಕೇವಲ 20 ಜನರಿಗೆ ಅವಕಾಶ.