ಆರ್.ಜಿ.ಪಿ.ಆರ್.ಎಸ್. ಸಂಘಟನೆಯಿಂದ ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ
ಉಡುಪಿ: ಇತ್ತೀಚೆಗೆ ಲಡಾಕ್ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹುತಾತ್ಮ ಯೋಧರ ಭಾವಚಿತ್ರದ ಎದುರು ಮೊಂಬತ್ತಿ ಬೆಳಗಿಸಿ ಮೌನ ಪ್ರಾರ್ಥನೆ ಸಲ್ಲಿಸುವುದರ ಮೂಲಕ ವೀರ ಯೋಧರಿಗೆ ಗೌರವ ಸಮರ್ಪಿಸಲಾಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡುತ್ತಾ, ಗಡಿ ರಕ್ಷಣೆ ಮಾಡುವಲ್ಲಿ ಕೇಂದ್ರ ಸರಕಾರವು ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಚೀನಾಕ್ಕೆ ಭೇಟಿ ಕೊಟ್ಟರೂ, ಗಡಿ ರಕ್ಷಣೆ ಮತ್ತು ಸೈನಿಕರ ಮೇಲಿನ ದಾಳಿಯನ್ನು ತಡೆಯುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಸದಾ ದೇಶದೊಂದಿಗೆ ಮತ್ತು ಸೈನಿಕರೊಂದಿಗೆ ಇದ್ದು, ಗಡಿ ಹಾಗೂ ಸೈನಿಕರ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಹುತಾತ್ಮರಾದ ಸೈನಿಕರನ್ನು ದಿನಪ್ರತಿ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿರಿಯ ನಾಯಕಿ ವೆರೋನಿಕಾ ಕರ್ನೆಲಿಯೊ ನುಡಿ ನಮನ ಸಲ್ಲಿಸಿದರು. ಮಾಜಿ ಶಾಸಕ ಯು. ಆರ್. ಸಭಾಪತಿ, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕಿ ರೋಶನಿ ಒಲಿವರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ನಾಯಕರಾದ ಹರೀಶ್ ಕಿಣಿ, ಜನಾರ್ಧನ್ ಭಂಡಾರ್ಕರ್, ಶಾಂತಿ ಪಿರೇರಾ, ಭಾಸ್ಕರ್ ರಾವ್ ಕಿದಿಯೂರು, ನಾಗೇಶ್ ಉದ್ಯಾವರ್, ಕೃಷ್ಣಮೂರ್ತಿ ಆಚಾರ್ಯ, ಗಣೇಶ್ ರಾಜ್ ಸರಳೇಬೆಟ್ಟು, ನರಸಿಂಹ ಮೂರ್ತಿ, ರೊನಾಲ್ಡ್ ಪ್ರವೀಣ್ ಕುಮಾರ್, ಸುಗಂಧಿ ಶೇಖರ್, ಚಂದ್ರಾವತಿ ಭಂಡಾರಿ, ಪುಂಡರೀಶ್ ಕುಂದರ್ ಹಾಗೂ ಇತರರು ಉಪಸ್ಥಿತರಿದ್ದರು.
ಡಾ. ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ, ಮೇರಿ ಡಿಸೋಜ ಧನ್ಯವಾದ ಸಮರ್ಪಿಸಿದರು.