ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಮುಂದೂಡಿಕೆ
ಮಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ರಾಜ್ಯ ಸರಕಾರ ಜಾರಿಗೊಸಿದ ನಿಯಮಗಳ ಹಿನ್ನಲೆಯಲ್ಲಿ ಇಂದಿನಿ0ದ (ಎ. 21) ರಿಂದ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.
ಈಗಾಗಲೇ ಎರಡು ಪರೀಕ್ಷೆಗಳು ಮುಂದೂಡಿಕೆಯಾಗಿದ್ದು, ಇಂದಿನಿ0ದ ನಡೆಯುವ ಪರೀಕ್ಷೆಗಳನ್ನೂ ರದ್ದು ಮಾಡಿದೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಿಳಿಸಿದ್ದಾರೆ.