ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದು:ಸಚಿವ ಸುಧಾಕರ್ ವಿಶ್ವಾಸ
ಬೆಂಗಳೂರು: ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು 3-4 ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಜನರು ಭಯಪಡುವ ಅಗತ್ಯ ಇಲ್ಲ.ಪ್ರತಿಯೊಬ್ಬರಿಗೂ ಆಸ್ಪತ್ರೆ ದಾಖಲಾಗುವ ಅವಶ್ಯಕತೆ ಇಲ್ಲ.ಯಾರು ಆಸ್ಪತ್ರೆಗೆ ದಾಖಲಾಗಬೇಕು, ಯಾರು ಆಗಬಾರದೆಂಬ ಬಗ್ಗೆ ಸಂಜೆ ವಿವರವಾಗಿ ಮಾಹಿತಿ ನೀಡುವುದಾಗಿ ಹೇಳಿದರು.
ಇದಲ್ಲದೆ ಬೆಂಗಳೂರಿನಲ್ಲಿ ಆಕ್ಸಿಜನ್ ಹಾಗೂ ರೆಮಿಡಿಸಿವಿರ್ ಲಭ್ಯತೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್. ಅಶೋಕ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಜತೆ ಸಮಾಲೋಚನೆ ನಡೆಸಲಾಯಿತು. ಪ್ರತಿಯೊಬ್ಬ ಕೊರೊನಾ ಸೋಂಕಿತ ವ್ಯಕ್ತಿಗೂ ಸೂಕ್ತ ಚಿಕಿತ್ಸೆ ಒದಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಎಂದಿದ್ದಾರೆ.