ಉಡುಪಿಯಲ್ಲೂ ಕೊರೋನಾ ‘ಮಹಾ’ ಸ್ಫೋಟ
ಉಡುಪಿ, ಎ.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಇಂದು 471ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಜಿಲ್ಲೆಯಲ್ಲಿ ಸದ್ಯ ಇರುವ ಸಕ್ರಿಯ ಪ್ರಕರಣ ಗಳ ಸಂಖ್ಯೆ 1084 ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿ 267 , ಕುಂದಾಪುರ 154, ಕಾರ್ಕಳ 44 ಹಾಗೂ ಹೊರ ಜಿಲ್ಲೆಯ 6 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳನ್ನು ಗಮನಿದರೆ ಉಡುಪಿ ತಾಲೂಕಿನಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.
ಎ.20 ವರೆಗೆ ಜಿಲ್ಲೆಯಲ್ಲಿ 4,75,645 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ27,483 ಮಂದಿಯಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 26,205 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13,646ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 13,640 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,83,675ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 70 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 6,312 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,32,233ಕ್ಕೆ ಏರಿಕೆಯಾಗಿದೆ. ಇನ್ನು 1,76,188 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 904 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.