ಉಡುಪಿ: 274 ಕೋವಿಡ್ ಪಾಸಿಟಿವ್, ಸಾವಿರ ದಾಟಿದ ಸಕ್ರಿಯ ಪ್ರಕರಣ

ಉಡುಪಿ, ಎ.22(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 274 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1166ಕ್ಕೆ ಏರಿಕೆಯಾಗಿದೆ. 

ಈ ಪೈಕಿ ಉಡುಪಿ ತಾಲೂಕು 127 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಕುಂದಾಪುರ 91 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇನ್ನು ಉಳಿದಂತೆ ಕಾರ್ಕಳ 53 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ.

ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 123 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 13885ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 25,795 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 15,244 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 68 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 5624 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,37,857ಕ್ಕೆ ಏರಿಕೆಯಾಗಿದೆ. ಇನ್ನು 1,96,236 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 243 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!