ಮಹಾರಾಷ್ಟ್ರ ಕೋವಿಡ್ ಆಸ್ಪತ್ರೆ ಅಗ್ನಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ- ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ
ಮುಂಬೈ ಎ.23: ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದುರ್ಘಟನೆಯಲ್ಲಿ 13 ಮಂದಿ ಸಜೀವ ದಹನವಾಗಿದ್ದು, ಅನೇಕ ಮಂದಿ ಗಾಯಗೊಂಡಿದ್ದರು. ಗಾಯಾಳು ರೋಗಿಗಳನ್ನು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರೆ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದೀಗ ಘಟನೆಗೆ ಸಂಬಂಧಿಸಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಿತ್ಯ ಸಾವು ನೋವುಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೋವಿಡ್ ಆಸ್ಪತ್ರೆಗಳು ಸೊಂಕಿತರಿಂದ ತುಂಬಿಹೋಗಿದ್ದು, ಬೆಡ್ ಇಲ್ಲದಂತಾಗಿದೆ ಎಂಬ ವಿಚಾರ ಒಂದೆಡೆಯಾದರೆ ಮತ್ತೊಂದೆಡೆ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮತ್ತಷ್ಟು ಆಘಾತ ಹೆಚ್ಚಿಸಿದೆ.
ಆಸ್ಪತ್ರೆಯಲ್ಲಿ ಇಂದು ಮುಂಜಾನೆ 3.15ರ ಸುಮಾರಿಗೆ ಐಸಿಯುನಲ್ಲಿದ್ದ ಏರ್ ಕಂಡೀಷನರ್ ನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.