ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ದೃಢ
ಕುಂದಾಪುರ ಎ.23 (ಉಡುಪಿ ಟೈಮ್ಸ್ ವರದಿ): ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ ಶಾಸಕರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿತ್ತು.
ಈ ವೇಳೆ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳೆದ ವರ್ಷ ಕೊರೋನಾ ಸಮಯದಲ್ಲಿ ಶಾಸಕರು ಜನರಿಗೆ ಕೊರೋನಾ ಅರಿವು ಮೂಡಿಸುವಲ್ಲಿ ಶ್ರಮಿಸಿದ್ದು, ಮಾತ್ರವಲ್ಲದೆ ಲಕ್ಷಾಂತರ ಮಾಸ್ಕ್ ಗಳನ್ನು ವಿತರಿಸಿದ್ದರು.