ಉಡುಪಿ: 282 ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 1265ಕ್ಕೆ ಏರಿಕೆ

ಉಡುಪಿ, ಎ.21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.  ಇಂದು ಜಿಲ್ಲೆಯಲ್ಲಿ 282 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 143, ಕುಂದಾಪುರ 108, ಕಾರ್ಕಳ 27 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು  ದೃಢ ಪಟ್ಟಿ ದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1265 ಕ್ಕೆ ಏರಿಕೆಯಾಗಿದೆ.

ಎ.22 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 4,81,570 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 28,039 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 26,580 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ   ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!