ಕೊರೋನಾ 2ನೇ ಅಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ: ಮೋದಿ
ನವದೆಹಲಿ: ಕೊರೋನಾ ವೈರಸ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದ್ದು, ಎರಡನೇ ಅಲೆ ಇಡೀ ದೇಶವನ್ನು ಬೆಚ್ಚಿಬೀಳುವಂತೆ ಮಾಡಿದೆ ಎಂದು ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.
ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನ 76ನೇ ಕಂತಿನಲ್ಲಿ ಮಾತನಾಡಿದ ಮೋದಿಯವರು, ಕೊರೋನಾ ನಮ್ಮ ಧೈರ್ಯ ಹಾಗೂ ನೋವು ಸಹಿಸಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವ ಸಂದರ್ಭದಲ್ಲಿ ನಾನಿಂದು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಮ್ಮ ಪ್ರೀತಿ ಪಾತ್ರರಾದ ಸಾಕಷ್ಟು ಮಂದಿ ನಮ್ಮನ್ನು ಅಕಾಲಿಕವಾಗಿ ಬಿಟ್ಟುಹೋಗುತ್ತಿದ್ದಾರೆ. ಕೊರೋನಾ ಮೊದಲೆ ಅಲೆ ಎದುರಿಸಿದ ಬಳಿಕ ಜನರ ನೈತಿಕ ಸ್ಥೈರ್ಯ ಹೆಚ್ಚಾಗಿದೆ. ಆದರೆ, ಎರಡನೇ ಅಲೆ ಇಡೀ ದೇಶವನ್ನೇ ಬಿಚ್ಚಿಬೀಳುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಈಗಾಗಲೇ ನಾನು ಸಾಕಷ್ಟು ತಜ್ಞರು ಹಾಗೂ ಹಲವಾರು ವಲಯಗಳ ಅಧಿಕಾರಿಗಳೊಂದಿಗೆ, ಔಷಧೀಯ ಉದ್ಯಮ, ಆ್ಯಕ್ಸಿಜನ್ ಉತ್ಪಾದಕರು ಸೇರಿದಂತೆ ಹಲವರೊಂದಿಗೆ ಸಬೆ ನಡೆಸಿ ಮಾತುಕತೆ ನಡೆಸಿದ್ದೇನೆ. ಕೊರೋನಾ ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ನಮ್ಮ ಆರೋಗ್ಯ ಕಾರ್ಯಕರ್ತರು, ವೈದ್ಯರು ಉತ್ತಮವಾಗಿ ಹೋರಾಟ ನಡೆಸುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಅನುಭವಗಳನ್ನು ಪಡೆದುಕೊಂಡಿದ್ದಾರೆ.
ವಿಶ್ವಾಸಾರ್ಹ ಮೂಲಗಳಿಂದ ಮಾತ್ರ ಕೊರೋನಾ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಿರಿ ಎಂದು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇನೆ. ಕೊರೋನಾ ಕುರಿತು ಸಾಕಷ್ಟು ವೈದ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ಅಲ್ಲದೆ, ರೋಗಿಗಳೊಂದಿಗೆ ಸಮಾಲೋಚನೆಗಳನ್ನೂ ನಡೆಸುತ್ತಿದ್ದಾರೆ. ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಭಾರತ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳೊಂದಿಗೆ ಒಗ್ಗೂಡಿ ಶ್ರಮಪಡುತ್ತಿದೆ.
ಲಸಿಕೆ ಕುರಿತು ಜನತೆ ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲಾ ರಾಜ್ಯ ಸರ್ಕಾರಗಳಿಗೂ ಭಾರತ ಸರ್ಕಾರ ಉಚಿತ ಲಸಿಕೆ ವಿತರಣೆ ಮಾಡಿದೆ ಎಂಬುದು ಎಲ್ಲರಿಗೂ ಗೊತ್ತಿದೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಫಲಾನುಭವವನ್ನು ಪಡೆದುಕೊಳ್ಳಬಹುದು. ಮೇ.1ರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ. ಕಾರ್ಪೊರೇಟ್ ವಲಯ ಕೂಡ ತಮ್ಮ ಉದ್ಯೋಗಿಗಳಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನದಲ್ಲಿ ಭಾಗಿಯಾಗಬಹುದು. ಭಾರತದ ಉಚಿತ ಲಸಿಕೆ ಕಾರ್ಯಕ್ರಮವು ಭವಿಷ್ಯದಲ್ಲಿಯೂ ಮುಂದುವರಿಯಲಿದೆ. ಈ ಉಚಿತ ಲಸಿಕೆ ಅಭಿಯಾನ ಕಾರ್ಯಕ್ರಮದ ಪ್ರಯೋಜನಗಳನ್ನು ಸಾಧ್ಯವಾದಷ್ಟು ಜನರಿಗೆ ತಲುಪಿಸುವಂತೆ ರಾಜ್ಯ ಸರ್ಕಾರಗಳಿಗೆ ವಿನಂತಿಸುತ್ತಿದ್ದೇನೆಂದು ಕೊರೋನಾ ವಿರುದ್ಧದ ಹೋರಾಟಲ್ಲಿ ಆ್ಯಂಬುಲೆನ್ಸ್ ಚಾಲಕರ ಸಹಕಾರ ಅತ್ಯುನ್ನತವಾಗಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ.