ಎ.28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಎಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು” ಮುಂದೂಡಲಾಗಿದೆ ಎಂದು ಸಚಿವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ವಿದ್ಯಾರ್ಥಿಗಳ ಅರೋಗ್ಯದ ಹಿತದೃಷ್ಟಿಯಿಂದ ಎಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಯನ್ನು ಮುಂದೂಡಲಾಗಿದೆ. ವಾರ್ಷಿಕ ಪರೀಕ್ಷೆಗಳು ಮುಗಿದ ತಕ್ಷಣವೇ ಪ್ರಯೋಗಿಕ ಪರೀಕ್ಷೆಗಳನ್ನು ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ” ಎಂದಿದ್ದಾರೆ.