ಉಡುಪಿ: 1500 ರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣ!

ಉಡುಪಿ, ಎ.25(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣ 1500 ರ ಗಡಿ ದಾಟಿದೆ.

ಇಂದು ಜಿಲ್ಲೆಯಲ್ಲಿ 319 ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿದೆ. ಈ ಪೈಕಿ ಉಡುಪಿ 156, ಕುಂದಾಪುರ 103,ಕಾರ್ಕಳ 59 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಕೋವಿಡ್ ಸೋಂಕು ಇರುವುದು  ದೃಢಪಟ್ಟಿದೆ. 

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1565ಕ್ಕೆ ಏರಿಕೆಯಾಗಿದೆ.
ಎ.24 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು  4,88,711 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 28,761ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈವರೆಗೆ ಜಿಲ್ಲೆಯ ಲ್ಲಿ 27002 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!