ಅಂತ್ಯಕ್ರಿಯೆಯಲ್ಲಿ 5 ಮಂದಿಯಷ್ಟೇ ಭಾಗವಹಿಸಬೇಕು: ಸರ್ಕಾರದ ಸುತ್ತೋಲೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಜನರು ಗುಂಪು ಸೇರುವುದಕ್ಕೆ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಅಂತ್ಯಕ್ರಿಯೆಯಲ್ಲಿ 5 ಮಂದಿಯಷ್ಟೇ ಭಾಗವಹಿಸಬೇಕೆಂದು ಆದೇಶಿಸಿದೆ.
‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖೆಯ ಮುಖ್ಯಸ್ಥರು ಮತ್ತು ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.