ಭಾರತಕ್ಕೆ 135 ಕೋಟಿ ರೂ. ನೆರವು ನೀಡಲು ಗೂಗಲ್ ಸಿಇಒ ಸುಂದರ್ ಪಿಚೈ ನಿರ್ಧಾರ

ವಾಷಿಂಗ್ಟನ್ ಎ.26: ದೇಶದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದೆ. ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಈ ನಡುವೆ ಭಾರತದ ನೆರವಿಗೆ ಇತರ ರಾಷ್ಟ್ರಗಳು ಮುಂದಾಗಿದ್ದು, ಭಾರತಕ್ಕೆ 135 ಕೋಟಿ ರೂ. ನೆರವು ನೀಡಲು ಗೂಗಲ್ ಸಿಇಒ ಸುಂದರ್ ಪಿಚೈ ನಿರ್ಧಾರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಮಿಕದ ಪರಿಸ್ಥಿತಿ ನೋಡಿ ಮನಸ್ಸು ಒಡೆದುಹೋದಂತಾಗಿದೆ. ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು ಮತ್ತು ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, ‘ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಮೆರಿಕ ಸರಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!