ಉಡುಪಿ: ಮತ್ತೆ ದಾಖಲೆ ರೀತಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಏರಿಕೆ
ಉಡುಪಿ, ಎ.27(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿದೆ. ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2000 ದತ್ತ ದಾಪುಗಾಲು ಇಡುತ್ತಿದೆ.
ಇಂದು ಜಿಲ್ಲೆಯಲ್ಲಿ ಬರೋಬ್ಬರಿ 477 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿ ತಾಲೂಕೊಂದರಲ್ಲೆ 263 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಕುಂದಾಪುರ 128, ಕಾರ್ಕಳ 82 ಹಾಗೂ ಹೊರಜಿಲ್ಲೆಯ 4 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 1892ಕ್ಕೆ ಏರಿಕೆಯಾಗಿದೆ.ಎ.26ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 4,94,899 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 29,650 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 27,564 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ