ಉಡುಪಿ: 664 ಕೋವಿಡ್ ಪಾಸಿಟಿವ್ ಪ್ರಕರಣ ದೃಢ
ಉಡುಪಿ, ಎ.28(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಈವರೆಗೆ 400 ಕ್ಕಿಂತ ಅಧಿಕ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳು ಇಂದು ಒಂದೇ ಸಮನೆ 600ಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2000 ಗಡಿ ದಾಟಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 664 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿ ತಾಲೂಕೊಂದರಲ್ಲೇ 332 ಮಂದಿಯಲ್ಲಿ ಸೋಂಕು ಪತ್ತೆಯಾದರೆ, ಕುಂದಾಪುರ 249 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಕಾರ್ಕಳ 76 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ.ಎ.27 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 4,98,448 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 30,314 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯ ಲ್ಲಿ 27,890 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ194 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೂಡ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು ದಾಖಲೆಯ 39,047 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 229 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 22,596 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 137 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 11,833 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,95,883ಕ್ಕೆ ಏರಿಕೆಯಾಗಿದೆ. ಇನ್ನು 3,28,884 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 2,192 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ