ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಜ್ವರ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿಕೊಳ್ಳಿ: ಜಿಲ್ಲಾಧಿಕಾರಿ
ಉಡುಪಿ ಜೂನ್ 20: ಜಿಲ್ಲೆಯಲ್ಲಿ ಈಗಾಗಲೇ ಮಹಾರಾಷ್ಟç ಹಾಗೂ ಇತರ ಸ್ಥಳಗಳಿಂದ ಆಗಮಿಸಿದ ಅನೇಕರಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು ಎಲ್ಲರನ್ನೂ ಚಿಕಿತ್ಸೆಗೊಳಪಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುಮಾರು 13 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಕೋವಿಡ್ 19 ಲಕ್ಷಣಗಳಿರುವ ಯಾವುದೇ ವ್ಯಕ್ತಿಯನ್ನು ಪರೀಕ್ಷಿಸಿ ಸೋಂಕು ಇದ್ದಲ್ಲಿ ತಕ್ಷಣವೇ ಗುರುತಿಸಿ ಚಿಕಿತ್ಸೆಗೊಳಪಡಿಸುವುದು ಮೂಖ್ಯವಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಸರ್ವೆಲೈನ್ಸ್ ಚುರುಕುಗೊಳಿಸಿದ್ದು ಯಾವುದೇ ಸಂಶಯಾತ್ಮಕ ಪ್ರಕರಣಗಳನ್ನು ಪತ್ತೆ ಹಚ್ಚಲು ಹಾಗೂ ಖಿನ್ನ ವ್ಯಕ್ತಿಗಳನ್ನು ಗುರುತಿಸಿ ಸೋಂಕು ತಗಲದಂತೆ ನೋಡಿಕೊಳ್ಳಲು ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ತಂಡ ರಚಿಸಲಾಗಿದೆ. ಕೋವಿಡ್ ಲಕ್ಷಣಗಳಿರುವ ವ್ಯಕ್ತಿಗಳನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಈಗಾಗಲೇ 10 ಜ್ವರ ತಪಾಸಣೆ ಕ್ಲಿನಿಕ್ ಗಳನ್ನು, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು, ಸರ್ಕಾರಿ ಆಸ್ಪತ್ರೆ ಕುಂದಾಪುರ, ಸಮುದಾಯ ಆರೋಗ್ಯ ಕೇಂದ್ರ ಕೋಟ, ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ, ಜಿಲ್ಲಾ ಆಸ್ವತ್ರೆ ಉಡುಪಿ,ಕೆ.ಎಂ.ಸಿ ಮಣಿಪಾಲ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ, ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಮತ್ತು
ತಾಲೂಕು ಆಸ್ಪತ್ರೆ ಕಾರ್ಕಳ ಇಲ್ಲಿ ಸ್ಥಾಪಿಸಲಾಗಿದೆ.
ಜ್ವರ ತಪಾಸಣೆ ಕ್ಲಿನಿಕ್ ಗಳಲ್ಲಿ ಕೋವಿಡ್ 19 ಸಂಶಯಾತ್ಮಕ ಪ್ರಕರಣಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವ ಗಂಟಲು ಮಾದರಿ ಸಂಗ್ರಹಿಸುವ ಹಾಗೂ ಕೋವಿಡ್ ಅಲ್ಲದ ಇತರ ಜ್ವರ ಪ್ರಕರಣಗಳನ್ನು ಯೋಗ್ಯವಾಗಿ ಗುರುತಿಸಿ ಚಿಕಿತ್ಸೆ
ನೀಡುವ ಕುರಿತು ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲೆಯ ಎಲ್ಲಾ ದೊಡ್ಡ ಖಾಸಗಿ ಆಸ್ವತ್ರೆ ಹಾಗೂ ನರ್ಸಿಂಗ್ ಹೋಂಗಳಲ್ಲಿ ಪ್ರತ್ಯೇಕ ಜ್ವರ ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಇದರಿಂದ ಉಳಿದ ರೋಗಿಗಳಿಗೆ ಮತ್ತು
ಆಸ್ವತ್ರೆ ಸಿಬ್ಬಂದಿಗಳಿಗೆ ಸೋಂಕು ಹರಡುವುದು ತಪ್ಪಿಸಬಹುದಾಗಿದೆ.
ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಒಳ ಪ್ರದೇಶಗಳಿಂದ ಬರುವ ರೋಗಿಗಳಿಗಾಗಿ ಪ್ರತ್ಯೇಕ ತಪಾಸಣೆ ಕೇಂದ್ರವನ್ನು ಸ್ಥಾಪಿಸಲು ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿದ್ದಾಪುರದಲ್ಲಿ ಜ್ವರ ತಪಾಸಣ
ಕೇಂದ್ರ ಸ್ಥಾಪಿಸಲು ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲಿ ಆರಂಭಗೊಳ್ಳಲಿದೆ.
ಕೋವಿಡ್-19 ಸೋಂಕು ಜನಸಾಮಾನ್ಯರಲ್ಲಿ ಯಾರಿಗೂ ಸಹ ಹರಡಬಹುದಾಗಿದ್ದು, ಶೀಘ್ರ ಪತ್ತೆ/ ತ್ವರಿತ ಚಿಕಿತ್ಸೆ ನೀಡಿದಲ್ಲಿ ಸಂಪೂರ್ಣ ಗುಣಮುಖರಾಗಬಹುದಾಗಿದೆ. ಆದ್ದರಿಂದ ಜಿಲ್ಲೆಯ ಸಾರ್ವಜನಿಕರು ಯಾವುದೇ ಜ್ವರ /ಕೆಮ್ಮು/ಉಸಿರಾಟದ
ತೊಂದರೆ ಮುಂತಾದ ಕೋವಿಡ್ ಲಕ್ಷಣಗಳು ಬಂದಲ್ಲಿ ಹತ್ತಿರದ ಜ್ಬರ ತಪಾಸಣಾ ಕೇಂದ್ರಕ್ಕೆ ಹೋಗಿ ತಪಾಸಣೆಗೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.