ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳ ಸಮಸ್ಯೆಗೆ ಸಹಾಯವಾಣಿ ಆರಂಭ
ಉಡುಪಿ ಎ. 29(ಉಡುಪಿ ಟೈಮ್ಸ್ ವರದಿ): ಲಾಕ್ ಡೌನ್ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳ ಸಮಸ್ಯೆಗೆ ಸಹಾಯವಾಣಿ ಆರಂಭಿಸಲಾಗಿದೆ.
ಎ. 26 ರಂದು ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಲ್ಲಿ ಲಾಕ್ಡೌನ್ ಸಂದರ್ಭ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿದೆ. ಆದ್ದರಿಂದ ಜಿಲ್ಲೆಯ ತೋಟಗಾರಿಕೆ ಬೆಳೆಗಾರ ರೈತರಿಗೆ ಯಾವುದೇ ತೊಂದರೆಯಾದಲ್ಲಿ ರೈತರು ಸಹಾಯವಾಣಿ ಸಂಖ್ಯೆ: 8431610820 ನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.