ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ

ಉಡುಪಿ ಜೂನ್ 20:ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಿಂದ ಆಗಮಿಸುವವರನ್ನು ಸರಕಾರದ ನಿರ್ದೇಶನದಂತೆ 14 ದಿನಗಳ ಹೋಂ ಕ್ವಾರಂಟೈನ್ ನಲ್ಲಿ ಇರಿಸಿ ಅವರ ಮನೆಗಳನ್ನು ಸೀಲ್ ಡೌನ್ ಹೋಂ ಕ್ವಾರಂಟೈನ್ ನಲ್ಲಿ ಇರಿಸಿದ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ನಿಗಧಿತ ಅವಧಿಯಲ್ಲಿ ಮನೆಯಿಂದ ಹೊರಬಂದಲ್ಲಿ ಸೋಂಕು ಸಮುದಾಯಕ್ಕೆ ಹರಡುವ
ಸಾಧ್ಯತೆಗಳು ಹೆಚ್ಚಿರುತ್ತವೆ. ಹೋಂ ಕ್ವಾರಂಟೈನ್ ಉಲ್ಲಂಘನೆ ಪ್ರಕರಣಗಳಲ್ಲಿ ಮೊದಲ ಬಾರಿ ಎಚ್ಚರಿಕೆ ನೀಡಲಾಗುವುದು, 2ನೇಉಲ್ಲಂಘನೆಗೆ ಕೇಸ್ ದಾಖಲಿಸಲಾಗುವುದು. ಹೋಂ ಕ್ವಾರಂಟೈನ್ ನಿಂದ ಇನ್ನ್ಟಿಟ್ಯೂಷನಲ್ ಕ್ವಾರಂಟೈನ್ ಗೆವರ್ಗಾಯಿಸಲಾಗುವುದು ಎಂದು ಎಚ್ಚರಿಸಲಾಗಿದೆ.


ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬರುತ್ತಿರುವ ಕಾರಣ ಹೋಂ ಕ್ವಾರಂಟೈನ್ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು
ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಅಧಿಕಾರಿವನ್ನು ಡಿಸಾಸ್ಟರ್ ಮೆನೇಜ್‌ಮೆಂಟ್ ಆಕ್ಟ್ 2005, ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ, ಹೋಂ ಕ್ವಾರಂಟೈನ್ ಬಗ್ಗೆ ನಿಗಾ ಇರಿಸುವ ಪ್ಲಾಯಿಂಗ್ ಸ್ಕ್ವಾಡ್ ಅಧಿಕಾರಿಗಳಿಗೆ ಮತ್ತು ಪೌರಾಯುಕ್ತರು ಉಡುಪಿ
ನಗರಸಭೆ, ಮುಖ್ಯಾಧಿಕಾರಿಗಳು ಕುಂದಾಪುರ/ಕಾರ್ಕಳ/ಕಾಪು ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಪಂಚಾಯತ್ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ,
ಹೆಬ್ರಿ ಇವರಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!