ಕುಂದಾಪುರ: ಗಾಂಜಾ ಸೇವನೆ ಯುವಕರ ಬಂಧನ
ಕುಂದಾಪುರ ಎ.29(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂದಿಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕನ್ಯಾನ ಗ್ರಾಮದ ಗುಡ್ಡೆಯಂಗಡಿ ಮೈದಾನ ಬಳಿ ನಡೆದಿದೆ.
ಕುಂದಾಪುರದ ಅಶ್ವಥ್, ಕಿಶನ್,ಪ್ರಥ್ವಿರಾಜ್ ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಈ ಮೂವರು ಗಾಂಜಾ ಸೇವಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಎ.26 ರಂದು ಈ ಮೂವರು ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಖಚಿತ ಪಡಿಸಲು ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಎ. 28 ರಂದು ಬಂದ ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಆರೋಪಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.