ಉಡುಪಿ: 568 ಮಂದಿಗೆ ಕೋವಿಡ್ ಪಾಸಿಟಿವ್ ದೃಢ, ಚಿಕಿತ್ಸೆ ಫಲಿಸದೆ ಇಬ್ಬರ ಮೃತ್ಯು
ಉಡುಪಿ, ಎ.29 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಜಿಲ್ಲೆಯಲ್ಲಿ 568 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಪೈಕಿ ಉಡುಪಿ ತಾಲೂಕೊಂದರಲ್ಲೆ 312 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಕುಂದಾಪುರ 175, ಕಾರ್ಕಳ 78 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 2,359 ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಜಿಲ್ಲೆಯಲ್ಲಿ ಕುಂದಾಪುರದ 76 ವರ್ಷದ ಓರ್ವ ವ್ಯಕ್ತಿ ಹಾಗೂ ಕಾರ್ಕಳದ 62 ವರ್ಷದ ಓರ್ವ ಮಹಿಳೆ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಎ.28 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,01,351 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 30,882 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 28,329 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ196 ಮಂದಿ ಸೋಂಕಿಗೆ ಬಲಿಯಾಗಿ ದ್ದಾರೆ
.