ಹಾಲು ಮಾರಾಟಕ್ಕೆ ಬೆಳಿಗ್ಗೆ 6 ರಿಂದ ರಾತ್ರಿ 8 ವರೆಗೆ ಅವಕಾಶ

ಉಡುಪಿ ಎ.29(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ 14 ದಿನಗಳ ಲಾಕ್ ಡೌನ್ ವಿಧಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅವಕಾಶ ನೀಡಲಾಗಿತ್ತು.

ಇದೀಗ ಈ ಅವಧಿಯಲ್ಲಿ ಹಾಲು ಮಾರಾಟಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ಅದರಂತೆ  ಸರಕಾರದ ಪ್ರಧಾನ   ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅವರು ಹೊರಡಿಸಿರುವ ಹೊಸ ಆದೇಶ ದಲ್ಲಿ, ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳಿಗೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ಅಲ್ಲದೆ ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ReplyForward

Leave a Reply

Your email address will not be published. Required fields are marked *

error: Content is protected !!