ಮೂಡುಬೆಳ್ಳೆ: 100ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಸೋಂಕು ವದಂತಿ- ಪಂಚಾಯತ್ ಸ್ಪಷ್ಟನೆ

ಉಡುಪಿ, ಎ.30(ಉಡುಪಿ ಟೈಮ್ಸ್ ವರದಿ) : ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ 100ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಬೆಳ್ಳೆ ಗ್ರಾಮ ಪಂಚಾಯತ್ ಸ್ಪಷ್ಟೀಕರಣ ನೀಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿ  ಸ್ಪಷ್ಟಣೆ ನೀಡಿರುವ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ ಅವರು, ಕೆಲವೊಂದು ಸಾಮಾಜಿಕ ಜಾಲತಾಣದಲ್ಲಿ ಮೂಡುಬೆಳ್ಳೆಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಹರಡುತ್ತಿದ್ದು ಇದನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಪೆರ್ಣಂಕಿಲದ ವೈದ್ಯಾಧಿಕಾರಿಗಳು ಸ್ಪಷ್ಟವಾಗಿ ಸುಳ್ಳು ಎಂದು ತಿಳಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರು ಈ ವಂದಂತಿಗಳಿಗೆ ಕಿವಿಗೊಡಬಾರದು. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಯಾವುದೇ ತುರ್ತು ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಪೂಜಾರಿ (9980228418), ಗ್ರಾಮಕರಣಿಕ ಪ್ರದೀಪ್ ಕುಮಾರ್ (9164955727) ಹಾಗೂ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು, ಸ್ವಯಂಸೇವಕ ಅಶ್ವಿನ್ ಲಾರೆನ್ಸ್‌ ಮೂಡುಬೆಳ್ಳೆ (9844640011). ಸಂತೋಷ್ ಕುಮಾರ್ ಮೂಡುಬೆಳ್ಳೆ (9008169918) ಸಂಪರ್ಕಿಸಬಹುದು.

ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯತ್, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಎಲ್ಲಾ ಆವಶ್ಯಕ ಕ್ರಮಗಳನ್ನು ಕೈಗೊಂಡಿರುತ್ತದೆ. ಜನರು ಯಾವುದೇ ಆತಂಕಕ್ಕೆ ಒಳಗಾಗದೆ ಸರಕಾರದ ಮಾರ್ಗ ಸೂಚಿಗಳನ್ನು ಪಾಲಿಸಿ ಸುರಕ್ಷಿತವಾಗಿರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಪೆರ್ಣಂಕಿಲ ಇಲ್ಲಿ ಕೋವಿಡ್ ತಡೆ ಲಸಿಕೆ ಲಭ್ಯವಿರುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!