ಬೀದರ್ ನಗರಸಭೆ ಚುನಾವಣೆ: ಕಾಂಗ್ರೆಸ್’ಗೆ ಅತೀ ಹೆಚ್ಚು ಸ್ಥಾನ- ಯಾವ ಪಕ್ಷಕ್ಕೂ ಇಲ್ಲ ಬಹುಮತ

ಬೀದರ್: ನಗರಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕಿಲ್ಲ. 15 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಬಿಜೆಪಿ 8, ಜೆಡಿಎಸ್ 7, ಎಐಎಂಐಎಂ 2 ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಒಂದು ಸ್ಥಾನದಲ್ಲಿ ಜಯ ಗಳಿಸಿದ್ದಾರೆ. ಬೀದರ್ ನಗರಸಭೆಯಲ್ಲಿ ಒಟ್ಟು 35 ವಾರ್ಡ್ ಗಳಿವೆ.

 ನ್ಯಾಯಾಲಯದ ಮೊರೆ ಹೋದ ಕಾರಣ ವಾರ್ಡ್ ಸಂಖ್ಯೆ 26 ಹಾಗೂ 32 ರ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆದಿಲ್ಲ. ವಾರ್ಡ್ ಸಂಖ್ಯೆ 28ರ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಉಳಿದ 32 ಸ್ಥಾನಗಳಿಗೆ ಚುನಾವಣೆ ನಡೆದಿದೆ

Leave a Reply

Your email address will not be published. Required fields are marked *

error: Content is protected !!