ಮುಂದುವರಿದ ಕೋವಿಡ್ ಅಟ್ಟಹಾಸ 660 ಮಂದಿಯಲ್ಲಿ ಪಾಸಿಟಿವ್ ದೃಢ, ಉಡುಪಿಯ ಇಬ್ಬರು ಮೃತ್ಯು
ಉಡುಪಿ, ಎ.30(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಒಂದೆಡೆ ಕೊರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದರೆ ಮತ್ತೊಂದೆಡೆ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಅಷ್ಟೇ ಪ್ರಮಾಣದಲ್ಲಿ ಏರುತ್ತಿದೆ.
ಇದು ಜಿಲ್ಲೆಯ ಜನತೆ ಕೋವಿಡ್ ಕುರಿತು ಸಮಾಧಾನಪಡುವ ಸಂಗತಿಯಾಗಿದೆ. ಇಂದು ಜಿಲ್ಲೆಯಲ್ಲಿ 660 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹಾಗೆಯೇ ಎ.29. ರಂದು ಜಿಲ್ಲೆಯಲ್ಲಿ 419 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಪತ್ತೆಯಾದ 660 ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ ಈ ಪೈಕಿ ಉಡುಪಿಯಲ್ಲಿ 346 ಕುಂದಾಪುರ 217, ಕಾರ್ಕಳ 93 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2596 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಉಡುಪಿ ಯ 73 ವರ್ಷದ ಓರ್ವ ಪುರುಷ ಹಾಗೂ50 ವರ್ಷದ ಓರ್ವ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಎ.29 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,04,114 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 31,542 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 28,748 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ198 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 48,296 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 217 ಮಂದಿ ಸೋಂಕಿಗೆ ಬಲಿಯಾಗಿದ್ದು ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 26,756 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 7,56,740ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 93 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 14,884 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,24,909ಕ್ಕೆ ಏರಿಕೆಯಾಗಿದೆ. ಇನ್ನು 3,82,690 ಸಕ್ರೀಯ ಪ್ರಕರಣಗಳಿವೆ.