ಉಡುಪಿ: ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ನಾಳೆ (ಮೇ1) ಜಿಲ್ಲಾ ಪ್ರವಾಸ

ಉಡುಪಿ ಎ. 30: ರಾಜ್ಯದ ಗೃಹ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಮೇ 1 ಮತ್ತು 2 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 1 ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ
ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸಭೆ ನಡೆಸಿ ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡುವರು. ಮೇ 2 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ನಂತರ ಬೆಂಗಳೂರಿಗೆ
ತೆರಳಲಿರುವರು.

Leave a Reply

Your email address will not be published. Required fields are marked *

error: Content is protected !!