ಪಡಿತರ ಅಕ್ಕಿ ಕಡಿತ- ಸರ್ಕಾರದ ವಿರುದ್ಧ ಕಾಂಗ್ರೆಸ್ ಪೋಸ್ಟ್ ಕಾರ್ಡ್ ಚಳುವಳಿ
ಮೈಸೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ಕಡಿತ ಮಾಡಿರುವ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲಾಗುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ರಾಜ್ಯದ ಜನತೆಯ ಅಭಿಪ್ರಾಯ ಸಂಗ್ರಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ , 5 ಕೆಜಿ ಅಕ್ಕಿಯನ್ನ 2 ಕೆಜಿಗೆ ಇಳಿಸಿದ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿದರು. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆಯುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುತ್ತಿದೆ ಎಂದು ಹೇಳಿದರು.
ಹೆಚ್ಚಿನ ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯುವವರು ಸಾಯಲಿ ಎಂದು ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದ ಉಮೇಶ್ ಕತ್ತಿ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಇದು ಬಿಜೆಪಿಯವರ ಮನಃಸ್ಥಿತಿ. ಮಿಸ್ಟರ್ ಕಟೀಲ್ ಎಲ್ಲಿದ್ದೀರಿ..? ಏನಾದರೂ ಕೊರೊನಾ ಬಂದಿದೆಯಾ..? ಕಟೀಲ್ ಯೂಸ್ ಲೆಸ್ ರಾಜ್ಯಾಧ್ಯಕ್ಷ ಎಂದು ಹರಿಹಾಯ್ದರು.