ಹೆಚ್ಚಿದ ಕೊರೋನಾ ಸೋಂಕು: ಭಾರತದಿಂದ ಪ್ರಯಾಣ ನಿರ್ಬಂಧಿಸಿದ ಅಮೆರಿಕಾ

ವಾಷಿಂಗ್ಟನ್: ರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರಿಕಾಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಬೈಡನ್‌ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.

ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಮೇ.4 ರಿಂದ ಜಾರಿಯಾಗಲಿದೆ ಎಂದು ಜೆನ್ ಸಾಕಿ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಶನಿವಾರ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3523 ಮಂದಿ ಸಾವನ್ನಪ್ಪಿದ್ದಾರೆ. 

ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

Leave a Reply

Your email address will not be published. Required fields are marked *

error: Content is protected !!