ಜಿಲ್ಲೆಯಲ್ಲಿ 430 ಕೋವಿಡ್ ಪಾಸಿಟಿವ್, ಉಡುಪಿಯ ಇಬ್ಬರು, ಕುಂದಾಪುರದ ಓರ್ವರು ಮೃತ್ಯು
ಉಡುಪಿ, ಮೇ1(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಇಂದು 430 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಹಾಗೆಯೇ ಜಿಲ್ಲೆಯಲ್ಲಿ ಎ.30 ರಂದು 380 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮಖರಾಗಿ ಬಿಡುಗಡೆ ಹೊಂದಿದ್ದಾರೆ.
ಇಂದು ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿಯಲ್ಲಿ 226. ಕುಂದಾಪುರ 162, ಕಾರ್ಕಳ 39 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2643ಕ್ಕೆ ಏರಿಕೆಯಾಗಿದೆ.ಇಂದು ಜಿಲ್ಲೆಯಲ್ಲಿ ಉಡುಪಿಯ 64 ವರ್ಷದ ಪುರುಷ, 73 ವರ್ಷದ ಮಹಿಳೆ ಹಾಗೂ ಕುಂದಾಪುರದ 94 ವರ್ಷದ ಓರ್ವ ಮಹಿಳೆ ಸೇರಿ ಒಟ್ಟು ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಎ.30 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,06,680 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 31,972 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈವರೆಗೆ ಜಿಲ್ಲೆಯಲ್ಲಿ 29,128 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 201 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.