ಅಸ್ಸಾಂ: ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಬಹುಮತದತ್ತ ಹೆಜ್ಜೆ- 41 ರಲ್ಲಿ ಕಾಂಗ್ರೆಸ್ ಮುನ್ನಡೆ

ದಿಸ್ಪುರ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ ಹಾಕಿದೆ. ಒಟ್ಟು 126 ಸ್ಥಾನಗಳ ಪೈಕಿ 41 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೊನಾವಾಲ್ ಮತ್ತು ರಾಜ್ಯ ಹಣಕಾಸು ಮತ್ತು ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಕ್ರಮವಾಗಿ ಮಜೌಲಿ ಮತ್ತು ಜಲುಕ್ಬರಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್ , ಸಿಬ್ಸಾಗರ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಅಸ್ಸಾಂನಲ್ಲಿ ಬಹುಮತಕ್ಕೆ 64 ಕ್ಷೇತ್ರಗಳಲ್ಲಿ ಗೆಲುವು ಅಗತ್ಯ. ಬಿಜೆಪಿ ಇದೀಗ ಅದಕ್ಕಿಂತಲೂ ಐದಾರು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಅಸ್ಸಾಂನಲ್ಲಿ ಮಾರ್ಚ್ 27, ಏಪ್ರಿಲ್ 1 ಹಾಗೂ ಏಪ್ರಿಲ್ 6 ರಂದು ಮೂರು ಹಂತದಲ್ಲಿ ಚುನಾವಣೆ ನಡೆದಿತ್ತು. ಒಟ್ಟಾರೇ
ಶೇ.82.04 ರಷ್ಟು ಮತದಾನದ ಮೂಲಕ ಗಮನ ಸೆಳೆದಿತ್ತು.

Leave a Reply

Your email address will not be published. Required fields are marked *

error: Content is protected !!