ಉಡುಪಿ: 653 ಕೋವಿಡ್ ಪಾಸಿಟಿವ್ ದೃಢ, 788 ಮಂದಿ ಗುಣಮಖರಾಗಿ ಆಸ್ಪತ್ರೆಯಿಂದ ಬಿಡುಗಡೆ
ಉಡುಪಿ, ಮೇ.2(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳಿಗಿಂತ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು ಗಣನೀಯವಾಗಿ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಇಂದು 653 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಅದರಂತೆ ಜಿಲ್ಲೆಯಲ್ಲಿ ಮೇ.1ರಂದು 788 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿಯಲ್ಲಿ 347 ಕುಂದಾಪುರ 200, ಕಾರ್ಕಳ 104 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ 2,508 ಕ್ಕೆ ಏರಿಕೆಯಾಗಿದೆ. ಮೇ. 1ರವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,09,706 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 32,625 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 29,916 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ201 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ