ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ – ಕೆಕೆಆರ್ ಮತ್ತು ಆರ್’ಸಿಬಿ ನಡುವಿನ ಪಂದ್ಯ ಮುಂದೂಡಿಕೆ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಪರಿಣಾಮ ಇಂದು ನಡೆಯಬೇಕಾಗಿದ್ದ ಕೆಕೆಆರ್ ಮತ್ತು ಆರ್ ಸಿಬಿ ನಡುವಿನ ಪಂದ್ಯವನ್ನು ಮುಂದೂಡಲಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಎಲ್ಲರೂ ಹೋಟೆಲ್ ನಲ್ಲಿ ಐಸೋಲೇಶನ್ ಗೆ ಒಳಗಾಗಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನವೇ ಕೆಕೆಆರ್ ನ ನಿತೀಶ್ ರಾಣಾ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಗಣಮುಖರಾದ ಬಳಿಕವೇ ಅವರು ತಂಡದೊಂದಿಗೆ ಸೇರಿದ್ದರು.

ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಕೋವಿಡ್ ದೃಢವಾದ ಆಟಗಾರರು ಯಾರು ಎನ್ನುವ ಬಗ್ಗೆ ಇದುವರೆಗೆ ಮಾಹಿತಿ ಬಹಿರಂಗ ಪಡಿಸಿಲ್ಲ.

Leave a Reply

Your email address will not be published. Required fields are marked *

error: Content is protected !!