ಉಡುಪಿ: ಐಟಿ ಉದ್ಯೋಗಿ ಕೋವಿಡ್ ಸೋಂಕಿಗೆ ಬಲಿ
ಉಡುಪಿ: (ಉಡುಪಿ ಟೈಮ್ಸ್ ವರದಿ)ಲಾಕ್ ಡೌನ್ ಕಾರಣ ಬೆಂಗಳೂರಿನಿಂದ ಉಡುಪಿಗೆ ಬಂದ ಐಟಿ ಉದ್ಯೋಗಿಯೊರ್ವರು ಕೋವಿಡ್ ಸೋಂಕಿಗೆ ಬಲಿಯಾದ ಘಟನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ದೈವಿ ಅಂಬಾಗಿಲು ಪುತ್ತೂರಿನ ಅನಂತ ಆಚಾರ್ (38) ಎಂದು ತಿಳಿದು ಬಂದಿದೆ.
ಕಳೆದ ಒಂದು ತಿಂಗಳಿನಿಂದ ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದ ಅನಂತ್ ಅವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಪುತ್ತೂರಿನ ಪಿ. ಶ್ರೀಕಾಂತ ಆಚಾರ್ಯರ ಪುತ್ರರಾಗಿದ್ದ ಇವರು, ಪತ್ನಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.
ನಿಟ್ಟೂರು ಪ್ರೌಢಶಾಲೆಯ ಹಳೆವಿದ್ಯಾರ್ಥಿಯಾಗಿದ್ದ ಇವರ ನಿಧನಕ್ಕೆ ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಶಾಸಕರು ಆದ ಕೆ. ರಘುಪತಿ ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಮುಖ್ಯ ಶಿಕ್ಷಕಿ ಅನಸೂಯಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗಿಶ್ ಚಂದ್ರಾಧರ್ ಹಾಗೂ ಶಾಲೆಯ ಇಡೀ ಸಮೂಹ ತೀವ್ರ ಸಂತಾಪ ವ್ಯಕ್ತಪಡಿಸಿದೆ.
Wonderful news compilation
Wonderful news coverage
Factual news coverage