ಕಾಪು: ಹೋಟೆಲ್ ಸಿಬಂದಿ ಆತ್ಮಹತ್ಯೆ
ಕಾಪು ಮೇ.3 (ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.
ಸತೀಶ್ ಶೆಟ್ಟಿ (55) ಆತ್ಮಹತ್ಯೆ ಮಾಡಿಕೊಂಡವರು.
ಇವರು, ಉಳಿಯಾರಗೋಳಿ ಗ್ರಾಮದ ಕಲ್ಯಾದಲ್ಲಿ ವಾಸ ಮಾಡಿಕೊಂಡಿದ್ದು, ಕಾಪುವಿನ ಹೋಟೆಲ್ ವೊಂದರಲ್ಲಿ ಸಪ್ಲೈರ್ ಆಗಿ ಕೆಲಸ ಮಾಡಿಕೊಂಡಿದ್ದರು. ಅವರು ಟಿಬಿ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು ಅಲ್ಲದೇ ಅವರು ಕುಡಿತದ ಅಭ್ಯಾಸವನ್ನೂ ಹೊಂದಿದ್ದರು.ಇದರಿಂದಖಿನ್ನತೆಗೆ ಒಳಗಾಗಿದ್ದ ಇವರು, ಮೇ. 2 ರ ರಾತ್ರಿ ಯಿಂದ ಮೇ. 3 ರ ಮಧ್ಯಾವಧಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ